80ನೇ ಸ್ವಾತಂತ್ರ್ಯ ದಿನಾಚರಣೆ: ಎಸ್‌ಡಿಎಂ ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ
NV Paulose, Chairman, Global TV +91 98441 82044
ಮಂಗಳೂರು, ಆಗಸ್ಟ್ 15: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್‌ಮೆಂಟ್, ಕೊಡಿಯಾಲ್‌ಬೈಲ್, ಮಂಗಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಗೌರವಪೂರ್ಣವಾಗಿ ಆಚರಿಸಲಾಯಿತು.

ಎಸ್‌ಡಿಎಂ ಕಾಲೇಜಿನ ಆವರಣದಲ್ಲಿ ಬೆಳಿಗ್ಗೆ 8.45ಕ್ಕೆ ಆಯೋಜಿಸಲಾದ ಈ ಕಾರ್ಯಕ್ರಮಕ್ಕೆ ಭಾರತೀಯ ನೌಕಾಪಡೆಯ ನಿವೃತ್ತ ಕಮೋಡೋರ್ ಅತುಲ್ ಕುಮಾರ್ ರಾಸ್ತೋಗಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಧ್ವಜರೋಹಣ ಮಾಡಿ ದರು. ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸುವುದು ಹಾಗೂ ದೇಶದ ಏಕತೆ, ವೈವಿಧ್ಯತೆ ಮತ್ತು ಸ್ವಾತಂತ್ರ್ಯದ ಮೌಲ್ಯಗಳನ್ನು ಸ್ಮರಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ತಮ್ಮ ಭಾಷಣದಲ್ಲಿ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ಎಸ್‌ಡಿಎಂ ಲಾ ಕಾಲೇಜಿನ ಪ್ರಾಂಶುಪಾಲ ಡಾ. ತಾರಾನಾಥ ಶೆಟ್ಟಿ, ಹಾಗೂ ಎಸ್‌ಡಿಎಂ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್‌ಮೆಂಟ್‌ನ ಉಪ ಪ್ರಾಂಶುಪಾಲೆ ಶ್ರೀಮತಿ ದಿವ್ಯ ಉಚ್ಚಿಲ್, ಮಾಜಿ ಪ್ರಾಂಶುಪಾಲರಾದ ಡಾ ದೇವರಾಜ್ ಕೆ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.
ದೇಶಭಕ್ತಿ ಮತ್ತು ರಾಷ್ಟ್ರೀಯ ಏಕತೆಯ ಸಂದೇಶವನ್ನು ಸಾರುವ ಗೀತೆಗಳನ್ನು ಹಾಡಲಾಯಿತು. ಕಾರ್ಯಕ್ರಮದ ನಿರೂಪಣೆ ಕು ವಾರುಣಿ, ಸ್ವಾಗತ ಕು ರಚನಾ, ವಂದನಾರ್ಪಣೆ ಕು ಜೇಷ್ಠ ಮಾಡಿದರು. ಕಾರ್ಯಕ್ರಮದ ಸಂಯೋಜನೆಯನ್ನು ಶ್ರೀಮತಿ ಶಶಿಪ್ರಭಾ ಮತ್ತೂ ಶ್ರೀಯುತ ಸುದರ್ಶನ್ ನೆರವೇರಿಸಿದರು.
